Home

Announcement of Guarantee Schemes
Announcement of Guarantee Schemes
ಅನ್ನ ಭಾಗ್ಯ ಹಸಿವು ಮುಕ್ತ ಕರ್ನಾಟಕ
Announcement of Guarantee Schemes
ಗೃಹ ಜ್ಯೋತಿ ಪ್ರತಿ ಮನೆ ಬೆಳಗಲಿದೆ
Announcement of Guarantee Schemes
ಗೃಹ ಲಕ್ಷ್ಮಿ ಕುಟುಂಬ ನಿರ್ವಹಣೆಗಾಗಿ ಆರ್ಥಿಕ ನೆರವು
Announcement of Guarantee Schemes
ಶಕ್ತಿ ಸ್ತ್ರೀ ಸಬಲೀಕರಣದ ಮೂಲಕ ಸಮ ಸಮಾಜದತ್ತ ಹೆಜ್ಜೆ
Announcement of Guarantee Schemes
ಯುವನಿಧಿ ನಿರುದ್ಯೋಗಿ ಯುವಜನರ ಕನಸಿಗೆ ಆರ್ಥಿಕ ಬೆಂಬಲ
Announcement of Guarantee Schemes
Guarantee Schemes |June 02, 2023

The state cabinet has decided to launch all 5 guarantee schemes during the present financial year itself, Chief Minister Siddaramaiah announced here today.

Addressing a jam-packed press conference, after holding a special cabinet meeting regarding implementing 5 guarantee schemes announced by Congress party before elections, he said that he and the party president had signed the guarantee cards and distributed them to each household.

Accordingly when his Government came into power, in principle approval was given to implement these schemes on the very first cabinet meeting itself. In today;s meeting details of each scheme were discussed and decisions were taken, he explained.

ಗೃಹ ಲಕ್ಷ್ಮಿ | ಸಾಮಾನ್ಯ ಮಾಹಿತಿ
ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ₹ ೨೦೦೦

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.

ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳು
  • ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
  • ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.
  • ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 15 ರಿಂದ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
  • ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
  • ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
  • ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು .
  • ಗೃಹ ಜ್ಯೋತಿ | ಸಾಮಾನ್ಯ ಮಾಹಿತಿ
    ಗೃಹ ಜ್ಯೋತಿ ಯೋಜನೆ - ಗರಿಷ್ಟ ೨೦೦ ಯೂನಿಟ್ ಉಚಿತ ವಿದ್ಯುತ್

    “ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.

    ಈ ಯೋಜನೆಯನ್ನು ಜುಲೈ 2023 ರ ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್ 2023 ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ /164/ಪಿಎಸ್ ಆರ್ / 2023, ದಿನಾಂಕ: 05.06.2023, ಬೆಂಗಳೂರು ರಂತೆ ಆದೇಶಿಸಿದೆ.
  • ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
  • ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.
  • ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು.
  • ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
  • ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.
  • ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.
  • ದಿನಾಂಕ: 30.06.2023 ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
  • ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
  • ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
  • ಶಕ್ತಿ| ಸಾಮಾನ್ಯ ಮಾಹಿತಿ
    ರಾಜ್ಯದ ಎಲ್ಲಾ ಮಹಿಳಾ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ
    ಯುವನಿಧಿ| ಸಾಮಾನ್ಯ ಮಾಹಿತಿ
    ನಿರುದ್ಯೋಗಿ ಪದವೀಧರರಿಗೆ ಮಾಸಿಕ ರೂ.3000 ಭತ್ಯೆ ಮತ್ತು ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ ರೂ. 1500/- ಭತ್ಯೆ

    ರಾಜ್ಯದಲ್ಲಿ ೨೦೨೨ - ೨೩ ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿ ಗಳಿಗೆ ಪ್ರತಿ ತಿಂಗಳು ₹ ೩೦೦೦ (ಮೂರು ಸಾವಿರ ರೂಪಾಯಿಗಳು ಮಾತ್ರ) ಹಾಗು ಡಿಪ್ಲೋಮ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹೧೫೦೦ (ಒಂದು ಸಾವಿರದ ಐನೂರು ಮಾತ್ರ) ರಂತೆ ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು "ಯುವ ನಿಧಿ ಯೋಜನೆ" ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಜಾರಿಗೊಳಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಷರತ್ತು ಮತ್ತು ನಿಬಂಧನೆಗಳು

    ಪದವಿ ಅಥವಾ ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಲಭಿಸದ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುವುದು

    ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು

    ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು

    ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು

    ಯೋಜನೆಗೆ ಅರ್ಹರಾಗದೆ ಇರುವವರು:

    ಶಿಶಿಕ್ಷು (Apprentice) ವೇತನವನ್ನು ಪಡೆಯುತ್ತಿರುವವರು.

    ಸರ್ಕಾರೀ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

    ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.